ಹಿರಿಯೂರು ಉಪಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹೆಚ್.ಡಿ. ಕುಮಾರಸ್ವಾಮಿ ಒಲವು ತೋರಿದ್ದರೆ, ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದೆ. ಈ ಕುರಿತು ರಾಜ್ಯ ಮತ್ತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ. ಬೆಂಗಳೂರು/ಚಿತ್ರದುರ್ಗ, ನವೆಂಬರ್ 15: ಹಿರಿಯೂರು ಉಪಚುನಾವಣೆಗೆ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲ ಉಂಟಾಗಿದೆ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಆಸಕ್ತಿ ಹೊಂದಿದ್ದಾರೆ. ಇದಕ್ಕಾಗಿ ಅವರು ಈಗಾಗಲೇ ಪೂರ್ವಭಾವಿ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಮತ್ತೊಂದೆಡೆ, ರಾಜ್ಯ ಬಿಜೆಪಿ ನಾಯಕರು ಸಹ ತಮ್ಮದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ.