ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಕೊನೆಯ ಎಸೆತದಲ್ಲಿ ಮಣಿಸಿ ಭಾರತ ಕಿರಿಯರ ತಂಡ 2026ರ ಅಂಡರ್-19 ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ದೇಶವೇ ಈ ಐತಿಹಾಸಿಕ ಗೆಲುವನ್ನು ಸಂಭ್ರಮಿಸುತ್ತಿರುವ ಬೆನ್ನಲ್ಲೇ, ಚಾಂಪಿಯನ್ ತಂಡಕ್ಕೆ ಸಿಕ್ಕ ಅಧಿಕೃತ ಬಹುಮಾನದ ಮೊತ್ತ ಕೇಳಿ ಕ್ರಿಕೆಟ್ ಅಭಿಮಾನಿಗಳು ಅಕ್ಷರಶಃ ಅಚ್ಚರಿಗೊಂಡಿದ್ದಾರೆ. 2026ರ ಪುರುಷರ ಅಂಡರ್-19 ಏಷ್ಯಾ ಕಪ್ ಫೈನಲ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಭಾರತ ಕಿರಿಯರ ತಂಡ ಚಾಂಪಿಯನ್ ಪಟ್ಟಕ್ಕೇರಿದೆ. 338 ರನ್ಗಳ ಬೃಹತ್ ಗುರಿಯನ್ನು ಕೊನೆಯ ಎಸೆತದಲ್ಲಿ ಬೆನ್ನಟ್ಟಿ 1 ವಿಕೆಟ್ಗಳ ರೋಚಕ ಜಯ ಸಾಧಿಸಿದ ಯುವ ಪಡೆಗೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.