ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಹುದ್ದೆಗೆ ಹತ್ತಿರ ಬಂದು ತಪ್ಪಿ ಹೋಗಿರುವ ಬಗ್ಗೆ ತುಮಕೂರಿನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದು, ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ ಎಂದು ಹೇಳಿದ್ದಾರೆ. ಜನತೆಯ ಆಶೀರ್ವಾದದಿಂದ ತಾನು ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿದ್ದೇನೆ ಎಂದರು. ತುಮಕೂರು, ನವೆಂಬರ್ 15: ತುಮಕೂರಿನಲ್ಲಿ ನಡೆದ ಎಲ್ಇಡಿ ಪರದೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ತಮ್ಮ ಸುದೀರ್ಘ ರಾಜಕೀಯ ಪಯಣದ ಅನುಭವಗಳನ್ನು ಹಂಚಿಕೊಂಡ ಡಿಸಿಎಂ, ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ನೋಡಿದ್ದೇನೆ.