ಬಿಗ್ ಬಾಸ್ ಮನೆಯಲ್ಲಿ ಮಂಜನ ಜೊತೆಗಿನ ಸ್ನೇಹದ ಕಾರಣದಿಂದ ಗಾನವಿ ಅವರನ್ನು ಮಂಜಿ ಎಂದು ಎಲ್ಲರೂ ಕರೆಯುತ್ತಿದ್ದಾರೆ. ನವೆಂಬರ್ 15ರ ಭಾನುವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಕೂಡ ಅದೇ ವಿಚಾರವನ್ನು ಮಾತನಾಡಲಿದ್ದಾರೆ. ‘ಕಲರ್ಸ್ ಕನ್ನಡ’ ಹಂಚಿಕೊಂಡಿರುವ ಆ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ.. ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಮಂಜ ಅವರು ರೀ-ಎಂಟ್ರಿ ಪಡೆದುಕೊಂಡಿದ್ದಾರೆ. ಈಗ ಆಟಕ್ಕೆ ಚುರುಕು ಮುಟ್ಟಿಸಲು ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಆದರೆ ಎರಡನೇ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಬಗ್ಗೆ ಅವರು ಗಮನ ಹರಿಸಿದಂತೆ ಕಾಣುತ್ತಿಲ್ಲ. ವೈಲ್ಡ್ ಕಾರ್ಡ್ ಸ್ಪರ್ಧಿಯಾದ ಗಾನವಿ ಜೊತೆ ಅವರು ಆಪ್ತವಾಗಿ ನಡೆದುಕೊಳ್ಳುತ್ತಿದ್ದಾರೆ.