ಇಸ್ಲಮಾಬಾದ್ : ಅಂಡರ್-19 ಏಷ್ಯಾ ಕಪ್ ಫೈನಲ್ ( U19 Asia Cup ) ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ ಅನುಭವಿಸಿದ ರೋಚಕ ಸೋಲಿನ ಬೆನ್ನಲ್ಲೇ, ಪಾಕ್ ಕ್ರಿಕೆಟ್ ವಲಯದಲ್ಲಿ ತೀವ್ರ ಆಕ್ರ. ಪಾಕಿಸ್ತಾನದ ಮಾಜಿ ವೇಗದ ಬೌಲರ್ ತನ್ವೀರ್ ಅಹ್ಮದ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದು, ತಮ್ಮದೇ ದೇಶದ ಕ್ರಿಕೆಟ್ ವ್ಯವಸ್ಥೆಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಟಿವಿ ಕಾರ್ಯಕ್ರಮದ ಚರ್ಚೆಯೊಂದರಲ್ಲಿ ಮಾತನಾಡಿದ ತನ್ವೀರ್, ಭಾರತೀಯ ಕ್ರಿಕೆಟ್ ತಂಡಕ್ಕಿಂತ ಪಾಕಿಸ್ತಾನ ಉತ್ತಮವಾಗಿದೆ ಎಂದು ಹೇಳಿಕೊಳ್ಳುವುದನ್ನು ಮಂಡಳಿಯು ತಕ್ಷಣವೇ ನಿಲ್ಲಿಸಬೇಕು ಎಂದು ಕಿಡಿಕಾರಿದ್ದಾರೆ.