ಬೆಟ್ಟದಪುರ: ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ಆಗಮಿಸಿದ್ದ ಭಕ್ತರು ಬಿಟ್ಟು ಹೋಗಿರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಗ್ರಾಮ ಪಂಚಾಯಿತಿಯಿಂದ ಇತ್ತೀಚೆಗೆ ತೆರವುಗೊಳಿಸಿ ಸ. ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಇತರ ತ್ಯಾಜ್ಯಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಅವುಗಳನ್ನು ತೆರವುಗೊಳಿಸಲಾಯಿತು.ಪಿಡಿಒ ಎಚ್.ಡಿ ಮಂಜುನಾಥ್ ಮಾತನಾಡಿ, ಭಕ್ತರು ತ್ಯಾಜ್ಯವನ್ನು ಜವಾಬ್ದಾರಿಯಿಂದ ವಿಲೇವಾರಿ ಮಾಡಿದರೆ ಸಮಸ್ಯೆ ಉಂಟಾಗುವುದಿಲ್ಲ. ಪುಣ್ಯಕ್ಷೇತ್ರದ ಸ್ವಚ್ಛತೆ ಮತ್ತು ಪಾವಿತ್ರೃ ಕಾಪಾಡುವುದು ಪ್ರತಿಯೊಬ್ಬ ಭಕ್ತರ ಕರ್ತವ್ಯ ಎಂದರು.ಬೆಟ್ಟದ ಮೇಲ್ಭಾಗದಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿರುವುದರಿಂದ ಮುಂದಿನ ದಿನಗಳಲ್ಲಿ ಸಮಾಜ ಸೇವಕರು, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.