ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು (Parliament Winter Session) ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದ್ದು, ಈ ಬಾರಿಯ ಅಧಿವೇಶನದಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಕ. 2029ರ ಲೋಕಸಭಾ ಚುನಾವಣೆಗೆ ಮುನ್ನ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವ ಹಾದಿಯನ್ನು ಈ ಮಸೂದೆ ಸುಗಮಗೊಳಿಸಲಿದೆ.ಇದೊಂದು ಸಂವಿಧಾನ ತಿದ್ದುಪಡಿ ಮಸೂದೆಯಾಗಿರುವುದರಿಂದ, ಲೋಕಸಭೆಯಲ್ಲಿ ಅಂಗೀಕಾರವಾಗಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಇದರ ಅರ್ಥ, ಮಸೂದೆಯ ಪರವಾಗಿ ಕನಿಷ್ಠ 361 ಮತಗಳು ಬೀಳಬೇಕಾಗುತ್ತದೆ. ಪ್ರಸ್ತುತ 543 ಸದಸ್ಯ ಬಲದ ಲೋಕಸಭೆಯಲ್ಲಿ ಮೂರು ಸ್ಥಾನಗಳು ಖಾಲಿಯಿದ್ದು, ಒಟ್ಟು 540 ಸದಸ್ಯರಿದ್ದಾರೆ.