ಕಾಂಗ್ರೆಸ್ನ ಶಾಸಕರಾಗಿದ್ದ ಡಿ. ಸುಧಾಕರ್ ಅವರ ನಿಧನದಿಂದಾಗಿ ಹಿರಿಯೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಆದ್ರೆ, ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮುಖ್ಯವಾಗಿ ಹಿರಿಯೂರು ಟಿಕೆಟ್ಗಾಗಿ ದೋಸ್ತಿಗಳಾದ ಬಿಜೆಪಿ ಮತ್ತು ಜೆಡಿಎಸ್ (NDA ಮೈತ್ರಿಕೂಟ) ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಗೊಂದಲದ ನಡುವೆ ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆಗಳನ್ನು ನೀಡಿದ್ದಾರೆ. ಬೆಂಗಳೂರು, ನವೆಂಬರ್ 15: ಹಿರಿಯೂರು ಉಪ ಚುನಾವಣೆಯ ಘೋಷಣೆಗೂ ಮುನ್ನವೇ ರಾಜಕೀಯ ಬೆಳವಣಿಗೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿದ್ರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ನಿರ್ಮಾಣವಾಗಿದೆ.