ಬೆಂಗಳೂರಿನಲ್ಲಿ ರೌಡಿ ಚಟುವಟಿಕೆ ಹಾಗೂ ಮಾದಕವಸ್ತು ದಂಧೆ ಮಟ್ಟಹಾಕಲು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಸ್ಥಳೀಯ ಪೊಲೀಸರ ಹಸ್ತಕ್ಷೇಪವಿಲ್ಲದೆ, ನೇರವಾಗಿ ಕಮಿಷನರೇಟ್ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ. ಬೆಂಗಳೂರು, ನ.15: ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಹಾಗೂ ಮಾದಕವಸ್ತು ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳೀಯ ಪೊಲೀಸ್ ಠಾಣೆಗಳ ವ್ಯಾಪ್ತಿ ಮತ್ತು ನಿಯಂತ್ರಣವನ್ನು ಹೊರತುಪಡಿಸಿ, ನೇರವಾಗಿ ಪೊಲೀಸ್ ಕಮಿಷನರೇಟ್ನ ಪ್ರತ್ಯೇಕ ಕಂಟ್ರೋಲ್ನಲ್ಲಿ ಕಾರ್ಯನಿರ್ವಹಿಸುವ 'ಪ್ರತ್ಯೇಕ ರೌಡಿ ಸ್ಕ್ವಾಡ್' ರಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಬೆಂಗಳೂರಿನಲ್ಲಿ ರೌಡಿಗಳು ಸ್ಥಳೀಯ ಪೊಲೀಸರ ಜೊತೆ ಹೊಂದಾಣಿಕೆ ಹಾಗೂ ಸಂಪರ್ಕದಲ್ಲಿರುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕಿದೆ.