ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್, ರೈತರಿಗೆ ತೂಕದಲ್ಲಿ ಮೋಸ ಮಾಡುತ್ತಿದ್ದ ತೂಕದ ಯಂತ್ರಗಳನ್ನು ಸೀಜ್ ಮಾಡಿಸಿದ್ದಾರೆ. ಮಳಿಗೆಗಳಿಗೆ ತೆರಳಿ ಯಂತ್ರಗಳನ್ನು ಪರಿಶೀಲಿಸಿದ ಸಚಿವರು, ಅಕ್ರಮ ಕಂಡುಬಂದ ಯಂತ್ರಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೈಸೂರು, ನವೆಂಬರ್ 16: ರೈತರಿಗೆ ತೂಕದಲ್ಲಿ ಮೋಸ ಮಾಡುತ್ತಿದ್ದ ತೂಕದ ಯಂತ್ರಗಳ ವಿರುದ್ಧ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರಿನ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಸಚಿವರು, ಪ್ರತಿಯೊಂದು ಮಳಿಗೆಗೂ ತೆರಳಿ ತೂಕದ ಯಂತ್ರಗಳನ್ನು ಪರಿಶೀಲಿಸಿದ್ದಾರೆ.