‘ಪ್ರೇಮದ ಊರಲಿ’ ಸಿನಿಮಾ ಮೂಲಕ ಭರ್ಜರಿ ಜನಪ್ರಿಯತೆ ಗಳಿಸಿರುವ ಬೆಳಗಾವಿಯ ಪ್ರತಿಭಾವಂತ ನಟಿ ಆರಾಧ್ಯಾ ನಾಯರ್, ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ತೆರೆ ಹಂಚಿಕೊಳ್ಳುವ ದೊಡ್ಡ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಸ್ಯಾಂಡ್ವುಡ್ನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿರುವ ನಟಿ ಆರಾಧ್ಯಾ ನಾಯರ್ ಈಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕಥಾನಾಯಕಿ ರುಕ್ಮಿಣಿ (ತಪಸ್ವಿನಿ ಪೂಣಚ್ಚ) ಅವರ ಗೆಳತಿಯಾಗಿ ಬಣ್ಣ ಹಚ್ಚಿರುವ ಆರಾಧ್ಯಾ, ತಮ್ಮ ಲವಲವಿಕೆಯ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ.