ಗುಜರಾತ್ ಸಫಾರಿ ಪಾರ್ಕ್ನಲ್ಲಿ ಸಿಬ್ಬಂದಿ ಬೈಕ್ನಲ್ಲಿ ಸಿಂಹ ಬೆನ್ನಟ್ಟಿದ ವಿಡಿಯೋ ವೈರಲ್ ಆಗಿದೆ. ಪ್ರಾಣಿ ಸುರಕ್ಷತೆ ಬಗ್ಗೆ ಪ್ರಶ್ನೆ ಹುಟ್ಟುಹಾಕಿದ ಈ ಘಟನೆಗೆ ಮೂವರು ಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಸಿಂಹವನ್ನು ಆವರಣಕ್ಕೆ ಮರಳಿಸಲು ಬೈಕ್ ಬಳಸಿದ್ದು ನಿಯಮ ಉಲ್ಲಂಘನೆಯಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಂಡಿದೆ. ಅಹಮದಾಬಾದ್, ನವೆಂಬರ್ 16:ಗುಜರಾತ್ನ ಸಫಾರಿ ಪಾರ್ಕ್ನಲ್ಲಿ ಸಿಂಹವನ್ನು ಅರಣ್ಯ ಸಿಬ್ಬಂದಿ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಪ್ರಾಣಿಗಳ ಸುರಕ್ಷತೆ ಮತ್ತು ಅರಣ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.