Restaurant Vandalism: ತಂದೆ ಮೇಲೆ ಹೋಟೆಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆಂಬ ಆರೋಪದಿಂದ ಆಕ್ರೋಶಗೊಂಡ ಇಬ್ಬರು ಸಹೋದರಿಯರು ರಸ್ತೆಬದಿ ಹೋಟೆಲ್ಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಉತ್ತರ ಪ್. ಹೋಟೆಲ್ನಲ್ಲಿದ್ದ ಪಾತ್ರೆಗಳನ್ನು ಉರುಳಿಸಿ, ಸಿಬ್ಬಂದಿ ಮೇಲೆ ನೀರು ಎರಚಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ವರದಿಗಳ ಪ್ರಕಾರ, ನವೆಂಬರ್ 4ರಂದು ಸಹೋದರಿಯರ ತಂದೆ ಹಾಗೂ ಹೋಟೆಲ್ ಸಿಬ್ಬಂದಿ ನಡುವೆ ಜಗಳ ನಡೆದಿತ್ತು. ಈ ವೇಳೆ ಸಿಬ್ಬಂದಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬದವರು ಭೇಲುಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.