ಗದಗ: ಜಿಲ್ಲೆಯ ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಮಕ್ಕಳ ಅಭಿರುಚಿಗನುಸಾರ ಆಹಾರ ಒದಗಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ. ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಅಂಗನವಾಡಿಗಳ ಒಟ್ಟಾರೆ ವ್ಯವಸ್ಥೆ ಸುಧಾರಣೆಯಾಗಬೇಕು ಎಂದರು..ಉಚ್ಛ ನ್ಯಾಯಾಲಯದ ಆದೇಶದನ್ವಯ ರಾಜ್ಯದಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾಗಿರುವ ಹಾಗೂ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರೂ ಆದ ವೇಣುಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸದರಿ ಸಮಿತಿಯ ಅಧ್ಯಕ್ಷರು ಅಂಗನವಾಡಿಗಳ ಸ್ಥಿತಿಗತಿಯ ಬಗ್ಗೆ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗೆ ವಿ.ಸಿ.