ಇಟಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಕಾಂಗ್ರೆಸ್ ಆಯೋಜಿಸಿದ್ದ ಭಾರತ್ ಶೃಂಗಸಭೆಯಲ್ಲಿ ಯುರೋಪಿನ ರಾಜಕೀಯ ನಾಯಕ ಜಿಯಾಕೊಮೊ ಫಿಲಿಬೆಕ್ ನೀಡಿದ ಹೇಳಿಕೆ ಸದ್ಯ ರಾಜಕೀಯ. ಈ ಹೇಳಿಕೆಗೆ ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಪಕ್ಷದ ನಾಯಕಿ ಡೆಬೊರಾ ಬೆರ್ಗಮಿನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಮಾರು 97 ಕೋಟಿ ಮತದಾರರನ್ನು ಹೊಂದಿರುವ ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ವಿದೇಶಿ ನಾಯಕರು ಪ್ರಜಾಪ್ರಭುತ್ವದ ಪಾಠ ಹೇಳಿಕೊಡುವ ಅಗತ್ಯವಿಲ್ಲ. ಭಾರತಕ್ಕೆ ತನ್ನದೇ ಆದ ಪ್ರಜಾಪ್ರಭುತ್ವ ಸಂಸ್ಥೆಗಳು ಹಾಗೂ ಬಲಿಷ್ಠ ನ್ಯಾಯಾಂಗ ವ್ಯವಸ್ಥೆಯಿದೆ. ಇಂತಹ ದೇಶದ ಆಂತರಿಕ ವಿಚಾರಗಳಲ್ಲಿ ವಿದೇಶಿ ನಾಯಕರು ಅನಗತ್ಯವಾಗಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.