ಇಸ್ಲಾಮಾಬಾದ್ (ಆ.12) ಭ್ರಷ್ಟಾಚಾರ ಆರೋಪದಡಿ ಜೈಲು ಸೇರಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಿಧನರಾಗಿದ್ದಾರೆ ಎಂಬ ಸುದ್ದಿ ಪಾಕಿಸ್ತಾನದಲ್ಲಿ ಹರಿದಾಡುತ್ತಿದೆ. ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲಿದ್ದ ಇಮ್ರಾನ್ ಖಾನ್ಗೆ ಸೂಕ್ತ ಚಿಕಿತ್ಸೆಗೆ ಪಾಕಿಸ್ತಾನ ಸೇನೆ ವ್ಯವಸ್ಥೆ ಮಾಡಿಲ್ಲ. ಪರಿಣಾ ಜೈಲಿನಲ್ಲೇ ಇಮ್ರಾನ್ ಖಾನ್ ನಿಧನರಾಗಿದ್ದಾರೆ ಎಂದು ಪಾಕಿಸ್ತಾನ ಪತ್ರಕರ್ತ ವಜ್ಹತ್ ಸಯೀದ್ ಖಾನ್ ವಿಡಿಯೋ ಮೂಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾವಲ್ಪಿಂಡಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಮ್ರಾನ್ ಖಾನ್ ಸಾವಿನ ಕುರಿತು ಕೇಳಿಬರುತ್ತಿರುವ ವದಂತಿಗಳು ವೇಗವಾಗಿ ಹರಡುತ್ತಿದ್ದು, ಮತ್ತೊಂದು ಕೋಲಾಹಲಕ್ಕೆ ಕಾರಣವಾಗುತ್ತಿದೆ. ಪಾಕ್ ಪತ್ರಕರ್ತ ಹೇಳಿದ್ದೇನು?