Cyclone Akvan: ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ 'ಅಕ್ವಾನ್' ಚಂಡಮಾರುತದ ಪರಿಣಾಮ ನವೆಂಬರ್ 19ರಿಂದ 21ರವರೆಗೆ ಕೋಲ್ಕತ್ತಾ, ಹೌರಾ ಸೇರಿದಂತೆ ದಕ್ಷಿಣ ಬಂಗಾಳದ ಹಲವು ಜಿಲ್ಲೆಗಳಲ್ಲಿ ಭ. ಆದರೆ, ಉತ್ತರ ಬಂಗಾಳದಲ್ಲಿ ಮುಂದಿನ ಐದು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ.ಬಂಗಾಳ ಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಸೋಮವಾರ ಸಂಜೆಯ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಬಳಿಕ ಆಂಧ್ರಪ್ರದೇಶದತ್ತ ಸಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.