ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯಬೇಕಾದರೆ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಉಪ ಉತ್ಪನ್ನಗಳಿಂದ ಗಳಿಸುವ ಲಾಭದಲ್ಲೂ ರೈತರಿಗೆ ಪಾಲು ನೀಡಬೇಕು. ಕೇಂದ್ರ ಸರ್ಕಾರ ಕಬ್ಬಿನ ನ್ಯ. ಕೇಂದ್ರ ಸರ್ಕಾರ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ಪ್ರತಿ ಟನ್ಗೆ 4.5 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.ಶಾಸಕರ ಭವನದ ಸಭಾಂಗಣದಲ್ಲಿ ಕಬ್ಬು ಬೆಳೆಗಾರರ ಸಂಘ ಮತ್ತು ರೈತ ಸಂಘಗಳ ಒಕ್ಕೂಟ ಏರ್ಪಡಿಸಿದ್ದ ಕಬ್ಬು ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.ಬೆಳಗಾವಿಯಲ್ಲಿ ನಡೆದ ಕಬ್ಬು ಬೆಳೆಗಾರರ ಚಳವಳಿ ದೇಶದ ಗಮನ ಸೆಳೆದಿತ್ತು.