ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಖಾಸಗಿ ಮಾಧ್ಯಮದ ಮುಖ್ಯಸ್ಥ ಹಾಗೂ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆಯೂ ಸಿಸಿಬಿ ಅಧಿಕಾರಿಗಳು ಕೃಪಾ ಆಳ್ವಾರನ್ನು ಎರಡು ಬಾರಿ ವಿಚಾರಣೆಗೊಳಪಡಿಸಿ ಮತ್ತೆ ನೋಟಿಸ್ ನೀಡಿದಾಗ ಬರುವಂತೆ ಸೂಚಿಸಿದ್ದರು. ಅದರಂತೆ ಇಂದು (ನವೆಂಬರ್ 16) ಮೂರನೇ ಬಾರಿಗೆ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ.