ಸೂರ್ಯಕುಮಾರ್ ಯಾದವ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಗುಜರಾತ್ ವಿರುದ್ಧ 29 ಎಸೆತಗಳಲ್ಲಿ 82 ರನ್ ಸಿಡಿಸಿ ಅಬ್ಬರಿಸಿದ್ದಾರೆ. 7 ಸಿಕ್ಸರ್, 9 ಬೌಂಡರಿಗಳ ಮೂಲಕ ಮುಂಬೈ ತಂಡಕ್ಕೆ 198 ರನ್ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಲು ನೆರವಾದರು. ಸತತ ಎರಡನೇ ವಿಜಯದ ನಂತರ, ಸೂರ್ಯ ಅವರ ಸ್ಫೋಟಕ ಬ್ಯಾಟಿಂಗ್ ಭಾರತ ತಂಡಕ್ಕೆ ಮರಳುವ ಭರವಸೆಯನ್ನು ಹೆಚ್ಚಿಸಿದೆ. ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ತಮ್ಮ ಬ್ಯಾಟಿಂಗ್ ಮೂಲಕವೇ ಉತ್ತರಿಸುವ ಕಲೆಯನ್ನು ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಗುಜರಾತ್ ವಿರುದ್ಧ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಅಕ್ಷರಶಃ ಅಬ್ಬರಿಸಿದ್ದಾರೆ.