ಅಧಿಕೃತ ಸರ್ಕಾರಿ ನಿವಾಸ 'ಗಂಗಾ'ಗೆ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಅವರ ಕುಟುಂಬ ಪಾದಾರ್ಪಣೆ ಮಾಡಿದೆ. ನೊಣವಿನಕೆರೆ ಅಜ್ಜಯ್ಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ ಸೇರಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದ್ದು, ಕಾರ್ಯಕ್ರಮದಲ್ಲಿ ಡಿಕೆಶಿ ಅವರ ಆಪ್ತ ಶಾಸಕರು, ಸಚಿವರು ಭಾಗಿಯಾಗಿದ್ದರು. ಶಿವಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ಗೆ ಗಂಗಾ ಎಂದು ಮರುನಾಮಕರಣ ಮಾಡಿ, ಅದನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಪರಿವರ್ತಿಸಿದ್ದಾರೆ. ಹಳೆಯ ಕಟ್ಟಡವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಗೃಹಪ್ರವೇಶ ಕಾರ್ಯಕ್ರಮ ನಡೆದಿದೆ. ನಿನ್ನೆ (ನವೆಂಬರ್ 15) ರಾತ್ರಿಯಿಂದಲೇ ನೊಣವಿನಕೆರೆ ಅಜ್ಜಯ್ಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ ಸೇರಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗಿದೆ.