ಬಹುಭಾಷೆಯಲ್ಲಿ ಖ್ಯಾತಿ ಪಡೆದಿರುವ ನಟಿ ರಮ್ಯಾ ಕೃಷ್ಣನ್ ಅವರು ತಮ್ಮ ಖಾಸಗಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಪತಿ ಕೃಷ್ಣ ವಂಶಿ ಜೊತೆ ತಮಗೆ ಯಾವುದೇ ಮನಸ್ತಾಪ ಇಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಇಬ್ಬರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಕೇಳಿಬರುತ್ತಿದ್ದ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ. ಖ್ಯಾತ ನಟಿ ರಮ್ಯಾ ಕೃಷ್ಣನ್ ಮತ್ತು ನಿರ್ದೇಶಕ ಕೃಷ್ಣ ವಂಶಿ ದೂರವಾಗಿದ್ದಾರೆ, ಅವರಿಬ್ಬರು ವಿಚ್ಛೇದನ ಪಡೆದಿದ್ದಾರೆ ಎಂಬ ವದಂತಿಗಳು ಕಳೆದ ಹಲವು ವರ್ಷಗಳಿಂದ ಕೇಳಿಬರುತ್ತಲೇ ಇವೆ. ಇಬ್ಬರೂ ಬೇರೆ ಬೇರೆ ನಗರಗಳಲ್ಲಿ ವಾಸಿಸುತ್ತಿರುವುದು ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿತ್ತು.