ಹಾಸನ ಜಿಲ್ಲೆಯಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಇದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನವೆಂಬರ್ 18ರ ರಾತ್ರಿ 12 ಗಂಟೆಯವರೆಗೆ ಬೇಲೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸನ, ನವೆಂಬರ್ 16: ಹಾಸನ ಜಿಲ್ಲೆಯಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹೌದು...ಶನಿವಾರ ಕಾಡಾನೆ ದಾಳಿಯಿಂದ ಚೌಡನಹಳ್ಳಿ ಗ್ರಾಮದ ಜಯಮ್ಮ ಮೃತಪಟ್ಟಿದ್ದರು.