ಕರ್ನಾಟಕದ ಜಲ ಮತ್ತು ನೀರಾವರಿ ಹಿತಾಸಕ್ತಿ, ಕಾವೇರಿ ನೀರಿನ ಕೊರತೆ, ಮೇಕೆದಾಟು ಯೋಜನೆಗೆ ತುರ್ತು ಅನುಮೋದನೆ ಹಾಗೂ ಗೋದಾವರಿ-ಕೃಷ್ಣಾ-ಕಾವೇರಿ ನದಿ ಜೋಡಣೆಯಲ್ಲಿ ರಾಜ್ಯದ ನೀರಿನ ಪಾಲು ಹೆಚ್ಚಿಸುವಂತೆ ಆಗ್ರಹಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನವೆಂಬರ್ 16: ಕರ್ನಾಟಕದ ದೀರ್ಘಕಾಲೀನ ಜಲ ಮತ್ತು ನೀರಾವರಿ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ. ಶೀಘ್ರದಲ್ಲೇ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ, ಪತ್ರದಲ್ಲಿ ಪ್ರಸ್ತಾಪಿಸಿರುವ ಪ್ರಮುಖ ಅಂಶಗಳ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿಯೂ ಅವರು ತಿಳಿಸಿದ್ದಾರೆ.