ಆನೇಕಲ್ನ ದಕ್ಷಿಣ ಪಿನಾಕಿನಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಶವ ಹೊರತೆಗೆಯಲು ಬಂದ ವ್ಯಕ್ತಿಯೂ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ನಲ್ಲಿ ನಡೆದಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಎರಡು ಶವಗಳಿಗಾಗಿ ಶೋಧ ನಡೆಸಿದ್ದಾರೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆನೇಕಲ್, ನವೆಂಬರ್ 16: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಯಲ್ಲಿ ಘೋರ ದುರಂತವೊಂದು ನಡೆದಿದೆ. ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.