ಆಲೂರು: ನೂತನ ದೇವಾಲಯಗಳ ನಿರ್ಮಾಣ, ಪುರಾತನ ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ನಮ್ಮ ಭಕ್ತಿ, ನಂಬಿಕೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಶ್ಲಾಘನೀಯ ಕಾರ್ಯವಾಗಿದೆ ಎಂದು ಯಸಳೂರಿನ. ಅವು ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದ ಜೀವಂತ ಸಂಕೇತಗಳಾಗಿವೆ. ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ದೇವಸ್ಥಾನ ಜೀರ್ಣೋದ್ಧಾರ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ದೇವಾಲಯವು ಹಿಂದೆ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳಿಂದ ಪೂಜಿಸಲ್ಪಟ್ಟ ಪವಿತ್ರ ಕ್ಷೇತ್ರವಾಗಿದೆ ಎಂದರು.ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕಗಳಾಗಿವೆ. ಇಂತಹ ಪವಿತ್ರ ಕ್ಷೇತ್ರಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಧಾರ್ಮಿಕ ಕಾರ್ಯಗಳಿಗೆ ನೀಡುವ ದೇಣಿಗೆ ಅಥವಾ ಸೇವೆ ವ್ಯರ್ಥವಾಗುವುದಿಲ್ಲ.