ಹಾಸನ: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯಿಂದ ಉತ್ತರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.ರೆಡ್. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಪಾಲಕರು, ಶಿಕ್ಷಕರ ಗಮನಕ್ಕೆ ತರಬೇಕು ಎಂದು ತಿಳಿಸಿದರು.ರೆಡ್ಕ್ರಾಸ್ ಸಂಸ್ಥೆಯ ನಿರ್ದೇಶಕಿ ಮಮತಾ ಪಾಟೀಲ್ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಉತ್ತಮ ಪ್ರಜೆಗಳು ಎಂಬ ಮಾತಿನಂತೆ ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಬೆಳೆಸಿಕೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದರು.ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಲಾಯಿತು. ರಸಪ್ರಶ್ನೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಎಸ್ಡಿಎಂಸಿ ಅಧ್ಯಕ್ಷ ಎಚ್.ಬಿ.ಮಧು, ರೆಡ್ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಕೆ.ಟಿ.