ಹಾವೇರಿ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದ್ದು, ಇಂದು (ಶುಕ್ರವಾರ, ಅ.30) ಹಾವೇರಿಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಟನ್ ಕಬ್ಬ. ದರ ನಿಗದಿಪಡಿಸುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ಮನೆ ಎದುರು ಕಬ್ಬಿನ ಟ್ರ್ಯಾಕ್ಟರ್ ಸಮೇತ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಸಚಿವರ ಮನೆ ಎದುರೇ ಕಬ್ಬು ಸುರಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಜಿಲ್ಲಾಧಿಕಾರಿಗಳ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. .