‘ಗುಡ್ ನ್ಯೂಸ್’, ‘ಜುಗ್ ಜುಗ್ ಜಿಯೋ’ ಮತ್ತು ‘ಸೆಲ್ಫಿ’ ಚಿತ್ರಗಳನ್ನು ನಿರ್ದೇಶಿಸಿದ್ದ ರಾಜ್ ಮೆಹ್ತಾ ಅವರು ‘ಲಗ್ ಜಾ ಗಲೆ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಟೈಗರ್ ಶ್ರಾಫ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣದಲ್ಲಿ ಟೈಗರ್ ಶ್ರಾಫ್ ಅವರು ಭಾಗಿಯಾಗಿದ್ದಾರೆ. ಅಕ್ಟೋಬರ್ 18ರಂದು ಮುಂಬೈನಲ್ಲಿ ಅಪರಿಚಿತ ದುಷ್ಕರ್ಮಿಗಳು ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅದಾದ ಕೆಲವೇ ವಾರಗಳ ಬಳಿಕ ಅವರು ಮತ್ತೆ ಶೂಟಿಂಗ್ ಸೆಟ್ಗೆ ಮರಳಿದ್ದಾರೆ.