ಜಿಂಬಾಬ್ವೆಯ ಬ್ಲೆಸಿಂಗ್ ಮುಜರಬಾನಿ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ಅಜೇಯ 59 ರನ್ ಗಳಿಸುವ ಮೂಲಕ, ಈ ಸ್ಥಾನದಲ್ಲಿ ಅರ್ಧಶತಕ ಗಳಿಸಿದ ಜಿಂಬಾಬ್ವೆಯ ಮೊದಲ ಬ್ಯಾಟ್ಸ್ಮನ್ ಎನಿಸಿದ್ದಾರೆ. ಡೊನಾಲ್ಡ್ ತಿರಿಪಾನೊ ಅವರ ಹಿಂದಿನ ದಾಖಲೆಯನ್ನು ಮುರಿದು, ತಂಡಕ್ಕೆ ಆಸರೆಯಾಗಿ ಇತಿಹಾಸ ಬರೆದಿದ್ದಾರೆ. ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸಿಂಗ್ ಮುಜರಬಾನಿ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. 10ನೇ ಕ್ರಮಾಂಕದಲ್ಲಿ ಕ್ರೀಸ್ಗೆ ಇಳಿದು ಅರ್ಧಶತಕ ಸಿಡಿಸಿದ ಜಿಂಬಾಬ್ವೆಯ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಈ ಮೂಲಕ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ.