ಮೈಸೂರಿನ ಜೆಪಿ ನಗರದಲ್ಲಿ ಚೈನ್ ಸ್ನ್ಯಾಚಿಂಗ್ ಆರೋಪದ ಮೇಲೆ ಆರಂಭವಾದ ಗಲಾಟೆ ಇದೀಗ ಗುಂಪು ಘರ್ಷಣೆಗೆ ತಿರುಗಿದೆ. ಒಂದೇ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿದ್ದಾರೆ. ವಿಡಿಯೋ ನೋಡಿ. ನಗರದ ಕವಿತಾ ಬೇಕರಿ ಬಳಿ ನಡೆದ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವಿನ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಒಂದೇ ಪ್ರಕರಣದಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದು, ರಾಜಕೀಯ ತಿರುವು ಪಡೆದುಕೊಂಡಿದೆ.