ರಾಜ್ಯ ಸರ್ಕಾರದ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಈಗ ಭಾರತ್ ಜೋಡೋ ಹೆಸರಿನಲ್ಲಿ ದುಂದುವೆಚ್ಚ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. 4 Min Read ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದು, ಸಾರ್ವಜನಿಕರು ಕಟ್ಟುವ ತೆರಿಗೆ ಹಣವನ್ನು ಕೇವಲ ತಮ್ಮ ಪಕ್ಷದ ಕಾರ್ಯಕರ್ತರನ್ನು ಪೋಷಿಸಲು ಮತ್ತು ಗ್ಯಾರಂಟಿ ಯೋಜನೆಗಳ ಭ್ರಮೆ ಹುಟ್ಟಿಸಲು ಭಾರಿ ಪ್ರಮಾಣದಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಕಷ್ಟಪಟ್ಟು ರೈತರು ತೆರಿಗೆ ಕಟ್ಟುತ್ತಿದ್ದಾರೆ.