ನವೆಂಬರ್ 16ರಂದು ಹಾರ್ಮುಜ್ ಜಲಸಂಧಿಯಲ್ಲಿ ಪನಾಮಾ ಧ್ವಜವನ್ನು ಹೊಂದಿದ್ದ ‘ಎಂಟಿ ತಾರಾ ಗ್ಯಾಸ್’ ಎಂಬ ಎಲ್ಪಿಜಿ ಟ್ಯಾಂಕರ್ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಹಡಗಿನಲ್ಲಿದ್ದ 24 ಭಾರತೀಯ ಪ್ರಜೆಗಳ ಪೈಕಿ 21 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಗಾಯಗೊಂಡಿರುವ ಇಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಓರ್ವ ಭಾರತೀಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಹಾರ್ಮುಜ್ ಜಲಸಂಧಿಯ ಮೂಲಕ ಹೊರಹೋಗುವ ಮಾರ್ಗದಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಮಸ್ಕತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.