ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವೇಳೆ ಫಾರ್ಮ್-7ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿದ್ದ ಎಫ್ಐಆರ್ ಗೆಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಂಗಳೂರು, (ನವೆಂಬರ್ 17): ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವೇಳೆ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ 12 ಜನರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.