ಬೀದರ್: ರಾಜ್ಯ ಸರ್ಕಾರವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ. ಆದರೂ, ಈ ಭಾಗದ ಚುನಾಯಿತ ಪ್ರತಿನಿಧಿಗಳು ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಷಯವಾರು ಉಪನ್ಯಾಸಕರ ಬಹಳಷ್ಟು ಹುದ್ದೆಗಳು ಖಾಲಿ ಇವೆ. ಆದರೆ, 36 ಹುದ್ದೆ ಮಾತ್ರ ಭರ್ತಿ ಮಾಡುತ್ತಿರುವುದು ಆಘಾತ ಉಂಟು ಮಾಡಿದೆ. ಇದು, ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡಲಿದೆ ಎಂದು ತಿಳಿಸಿದ್ದಾರೆ.