ನವದೆಹಲಿ: ಇನ್ನೇನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಮದುವೆ ಸೀಸನ್ ಆರಂಭವಾಗಲಿದ್ದು ಚಿನ್ನ, ಬೆಳ್ಳಿ ಖರೀದಿಸಲು ಕಾಯುತ್ತಿದ್ದ ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ದೀಪಾವಳಿ ಮುಗಿದ. ದೀಪಾವಳಿ ಮುಗಿದ ಬೆನ್ನಲ್ಲೇ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಮಂದ ಪ್ರವೃತ್ತಿ ಮತ್ತು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಬಲಗೊಂಡಿರುವ ಪರಿಣಾಮ, ಭಾರತದಲ್ಲಿ ಮಂಗಳವಾರ ಚಿನ್ನದ ಬೆಲೆ ಸತತ ಆರನೇ ದಿನವೂ ಇಳಿಕೆ ಕಂಡಿದೆ. ಮತ್ತೊಂದೆಡೆ, ಬೆಳ್ಳಿ ದರವು ಒಂದೇ ದಿನ ಶೇಕಡಾ 5ರಷ್ಟು ಕುಸಿತ ಕಂಡು, ಕಳೆದ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ತಲುಪಿದೆ..ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ?