ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಮಾತೃಭೂಮಿ ಸಿನಿಮಾದ ತಾರಾಗಣ ಹಾಗೂ ತಾಂತ್ರಿಕ ಬಳಗಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ಕೈಗಡಿಯಾರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಪನ್ವೆಲ್ ಫಾರ್ಮ್ಹೌಸ್ನಲ್ಲಿ ನಡೆದ ವಿಶೇಷ ಕೂಟದಲ್ಲಿ ಈ ಉಡುಗೊರೆ ನೀಡಿ ಚಿತ್ರತಂಡದ ಶ್ರಮವನ್ನು ಕೊಂಡಾಡಿದ್ದಾರೆ. ಬಾಲಿವುಡ್ನ ಜನಪ್ರಿಯ ನಟ ಸಲ್ಮಾನ್ ಖಾನ್ ತಮ್ಮ ಉದಾರ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಈಗ ಅವರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ತಮ್ಮ ಮುಂಬರುವ ಬಹುನಿರೀಕ್ಷಿತ 'ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್' ಸಿನಿಮಾದ ಚಿತ್ರತಂಡಕ್ಕೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ.