ಉಡುಪಿಯ ಬ್ರಹ್ಮಾವರ ತಾಲೂಕಿನ ಅರೂರಿನಲ್ಲಿ ವಿದ್ಯುತ್ ತಂತಿಗೆ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಯೊಂದು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿಗೆ ಆಹುತಿಯಾಗಿದೆ. ಚಾಲಕ ಸಮಯಪ್ರಜ್ಞೆ ಮೆರೆದು ಲಾರಿಯನ್ನು ಮೈದಾನಕ್ಕೆ ನುಗ್ಗಿಸಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ನೋಡಿ ವಿಡಿಯೋ. ಉಡುಪಿ, ನ.18: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅರೂರು ಗ್ರಾಮದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹುಲ್ಲು ಸಾಗಿಸುತ್ತಿದ್ದ ಒಂದು ಲಾರಿ ವಿದ್ಯುತ್ ತಂತಿಗೆ ತಗುಲಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಅವಘಡವು ವಿದ್ಯುತ್ ತಂತಿ ತಗುಲಿದ ಪರಿಣಾಮವಾಗಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ.