ರಾಹುಲ್ ಗಾಂಧಿ ಅಮೆರಿಕದಲ್ಲಿ ಭಾರತ ಆರ್ಥಿಕ ವಿಪತ್ತಿನತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ವಿದೇಶದಲ್ಲಿ ಭಾರತದ ಪ್ರಗತಿಯನ್ನು ಕೆಟ್ಟದಾಗಿ ಬಿಂಬಿಸುವುದು ಅವರ ಅಭ್ಯಾಸ ಎಂದು ಟೀಕಿಸಿದೆ. ಈ ಹೇಳಿಕೆಗಳು ಆರ್ಥಿಕತೆ ಮತ್ತು ಯುವಕರ ಭವಿಷ್ಯದ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿವೆ. ನ್ಯೂಯಾರ್ಕ್, ನವೆಂಬರ್ 18: ಭಾರತದ ಆರ್ಥಿಕ ಪರಿಸ್ಥಿತಿ ಮತ್ತು ನಿರುದ್ಯೋಗ ಸಮಸ್ಯೆ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.