ಕರ್ನಾಟಕ ರಾಜ್ಯಾದ್ಯಂತ ನವೆಂಬರ್ 18ರಂದು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ, ಬೀದರ್, ಹುಬ್ಬಳ್ಳಿಯ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಆದಾಯ ಮೀರಿ ಆಸ್ತಿ ಗಳಿಸಿರುವ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳನ್ನು ಜಾಲಾಡಿದ್ದಾರೆ. ಲೋಕಾಯುಕ್ತದ ಈ ಕಾರ್ಯಾಚರಣೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದೆ. ಮಹತ್ವದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಬೆಂಗಳೂರು, ನ.18: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.