ಬೀರೂರು: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಡೂರು ಪಿಎಲ್ಡಿ ಬ್ಯಾಂಕ್ ನಿ. ಅಂದಿನಿಂದ ಇಂದಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದರೆ ಉತ್ತಮ ಸಾಧಕರಾಗಿ ಹೊರಹೊಮ್ಮಲು ಸಾಧ್ಯ. ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರು ಹಾಗೂ ಪಾಲಕರ ಸಹಕಾರ ಅಗತ್ಯ ಎಂದರು.ಇಂಜಿನಿಯರ್ ಪ್ರೇಮ್ ಕುಮಾರ್ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಲಾಯಿತು.