ಶಹಾಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಶಾಸಕ ಶರಣಬಸಪ್ಪ ದರ್ಶನಾಪುರ ಜಲಸಂಪನ್ಮೂಲ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಂಗಳವಾರ. ಈ ವೇಳೆ ಶಾಸಕ ರಾಜಾ ವೇಣುಗೋಪಾಲ ನಾಯಕ, ಕಾಡಾ ಅಧ್ಯಕ್ಷ ಬಾಬು ಹೊನ್ನಾನಾಯಕ ಇದ್ದರು.ನೀರು ಹರಿಸುವ ಕುರಿತು ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸಧ್ಯದ ರೈತರ ಸ್ಥಿತಿ-ಗತಿ ವಿವರಿಸಿದರು. ಮುಂಬರುವ ನೀರಾವರಿ ಸಲಹಾ ಸಮಿತಿ ಸಭೆಗೆ ಯಾದಗಿರಿ ಜಿಲ್ಲೆಯ ರೈತ ಮುಖಂಡರು ಹಾಗೂ ರೈತ ಸಂಘಟನೆಗಳ ಮುಖಂಡರನ್ನು ವಿಶೇಷವಾಗಿ ಆಹ್ವಾನಿಸುವಂತೆ ಸಚಿವರಿಗೆ ಮನವಿ ಮಾಡಿದರು.