ಯಾದಗಿರಿ: ಯುವಕರು ಉತ್ತಮ ಶಿಕ್ಷಣ ಪಡೆದು ರಾಜಕೀಯಕ್ಕೆ ಬಂದು ತಮ್ಮದೇ ಆದ ಛಾಪು ಮೂಡಿಸಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.ನಗರದ ಜವಾಹರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲ. ಪ್ರಸ್ತುತ ರಾಜಕೀಯದಲ್ಲಿಯೂ ಯುವಕರಿಗೆ ಸೂಕ್ತ ಸ್ಥಾನಮಾನ ಮತ್ತು ಮನ್ನಣೆ ಸಿಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಯುವಕರು ರಾಜಕೀಯವಾಗಿ ಮುಂಚೂಣಿಗೆ ಬಂದರೆ ಮಾತ್ರ ರಾಜ್ಯ ಮತ್ತು ದೇಶದ ಅಭಿವೃದ್ಧಿ ಸಾಧ್ಯ ಎಂದರು.ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಗಳೆರಡಿದ್ದು, ಪ್ರತಿಯೊಂದು ವಿಷಯದಲ್ಲೂ ಕೇವಲ ವಿರೋಧಿಸುವುದಕ್ಕಿಂತ ರಚನಾತ್ಮಕವಾಗಿ ಯೋಚಿಸಿ ಸರ್ಕಾರದ ಉತ್ತಮ ಕೆಲಸಗಳನ್ನು ಬೆಂಬಲಿಸುವುದು ಬಹಳ ಮುಖ್ಯ ಎಂದರು.