ಕಡೂರು: ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಾಗದೆ ಧರ್ಮ, ಸಂಸ್ಕೃತಿ ಹಾಗೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ಕೇಂದ್ರಗಳಾಗಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ಕೆ.ಆರ್.ನಗರ ಶಾಖಾ ಮಠದ ಶ್ರೀ ಶ. ಇಂತಹ ಧಾರ್ಮಿಕ ಕಾರ್ಯಗಳು ಸಮಾಜದಲ್ಲಿ ಶಾಂತಿ, ಸೌಹಾರ್ದ ಹಾಗೂ ಒಗ್ಗಟ್ಟನ್ನು ಬೆಳೆಸಲು ಸಹಕಾರಿ ಎಂದರು.ಗ್ರಾಮಗಳಲ್ಲಿ ಸಣ್ಣಪುಟ್ಟ ಗಲಾಟೆ ಹಾಗೂ ವಿವಾದಗಳು ಉಂಟಾದಾಗ ನ್ಯಾಯಕ್ಕಾಗಿ ಕೋರ್ಟ್-ಕಚೇರಿಗಳಿಗೆ ಅಲೆದಾಡುವ ಬದಲು ಊರಿನ ಹಿರಿಯರನ್ನು ಹಾಗೂ ದೇವರನ್ನು ಸಾಕ್ಷಿಯಾಗಿಟ್ಟುಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಹಿರಿಯರು ಸತ್ಯಾಸತ್ಯ ಪರಿಶೀಲಿಸಿ ನ್ಯಾಯಯುತ ತೀರ್ಮಾನ ಕೈಗೊಳ್ಳುವ ಮೂಲಕ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯ ಕಾಪಾಡಬೇಕಿದೆ ಎಂದು ತಿಳಿಸಿದರು.