ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜ್ಞಾನವೃದ್ಧಿಗೆ ಗ್ರಂಥಾಲಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್. ಓದುವ ಹವ್ಯಾಸವನ್ನು ಬೆಳೆಸಿಕೊಂಡು ಜ್ಞಾನ ಸಂಪಾದನೆಗೆ ಆದ್ಯತೆ ನೀಡಬೇಕು. ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಇಂತಹ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಮಾತನಾಡಿ, ವಚನಗಳಲ್ಲಿರುವ ಜೀವನಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ವಚನಗಳನ್ನು ಕಾಮಿಕ್ಸ್ ರೂಪದಲ್ಲಿ ಪರಿಚಯಿಸುವ ಹಾಗೂ ಅವುಗಳನ್ನು ಹಾಡುವ ಮೂಲಕ ಕಲಿಸುವ ಕಾರ್ಯ ಮೆಚ್ಚುವಂತಹದು ಎಂದರು.