ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 101ನೇ ಜನ್ಮದಿನೋತ್ಸವದ ಪ್ರಯುಕ್ತ ಪ್ರಶಾಂತಿ ನಿಲಯಂ (ಪುಟ್ಟಪರ್ತಿ) ಹಾಗೂ ಬೆಂಗಳೂರಿಗೆ ಆಗಮಿಸುವ ಭಕ್ತರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆ ವಿಶೇಷ ಎಕ್ಸ್ಪ್ರೆಸ್ ಹಾಗೂ ಮೆಮು ರೈಲುಗಳನ್ನು ಘೋಷಿಸಿದೆ. ದೇಶದ ಪ್ರಮುಖ ನಗರಗಳಿಂದ ಪುಟ್ಟಪರ್ತಿ ಮತ್ತು ಬೆಂಗಳೂರು ನಡುವೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಬೆಂಗಳೂರು, ನ.18: ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 101ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಶಾಂತಿ ನಿಲಯಂ (ಪುಟ್ಟಪರ್ತಿ) ಹಾಗೂ ಬೆಂಗಳೂರು ಕಡೆಗೆ ಆಗಮಿಸುವ ಭಕ್ತರ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ (South Western Railway) ವತಿಯಿಂದ ಹಲವು.