ರಾಜ್ಯ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಭರ್ಜರಿ ಮೇಜರ್ ಸರ್ಜರಿ ಮಾಡಿದೆ. 32 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿವುದರ ಜೊತೆಗೆ ಬೆಂಗಳೂರಿನಲ್ಲಿ ಐದು ಹೊಸ ಪೊಲೀಸ್ ಕಮಿಷನರೇಟ್ಗಳನ್ನು ರಚಿಸಲಾಗಿದೆ.ಮುಖ್ಯವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಕಮಿಷನರ್ ಆಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು, ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಒಟ್ಟು 32 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ನವೆಂಬರ್ 18) ಆದೇಶ ಹೊರಡಿಸಿದೆ.