ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ 7ನೇ ಹಾಗೂ 10ನೇ ತರಗತಿ ಪಾಸಾದವರಿಗೆ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ಹುದ್ದೆಗಳಿದ್ದು, ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಮಾಸಿಕ 27,000 - 46,650 ರೂ. ವೇತನ ಸಿಗಲಿದೆ. ಆಸಕ್ತರು ಡಿಸೆಂಬರ್ 07 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 7ನೇ ಹಾಗೂ 10ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.