ಲಡಾಖ್ನ ಖ್ಯಾತ ಪರಿಸರವಾದಿ, ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಬಂಧನದಲ್ಲಿಡಲು ಸರ್ಕಾರ ಬರೋಬ್ಬರಿ 2 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗಂಭೀರ ಆರೋಪ ಮಾಡಿರುವ ಅವರು, "ನಾನು ತೆರಿಗೆ ಕಟ್ಟುವುದನ್ನು ನಿಲ್ಲಿಸಬೇಕೇ?" ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಪ್ರಾಮಾಣಿಕ ನಾಗರಿಕರು ಕಟ್ಟುವ ತೆರಿಗೆ ಹಣವನ್ನು ದೇಶದ ಅಭಿವೃದ್ಧಿ, ಶಿಕ್ಷಣ ಮತ್ತು ಪರಿಸರ ಸಂರಕ್ಷಣೆಗೆ ಬಳಸುವ ಬದಲು, ಶಾಂತಿಯುತ ಹೋರಾಟಗಾರರನ್ನು ಹತ್ತಿಕ್ಕಲು ಮತ್ತು ಬಂಧಿಸಲು ವೆಚ್ಚ ಮಾಡಲಾಗುತ್ತಿದೆ ಎಂದು ಸೋನಮ್ ವಾಂಗ್ಚುಕ್ ಕಿಡಿಕಾರಿದ್ದಾರೆ.