ಚಿಕ್ಕಬಳ್ಳಾಪುರ: ತಾಲೂಕಿನ ಚದಲಪುರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ(ನ. 18) ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚದಲಪುರ ಕ್ರಾಸ್ ಸಮೀಪದಲ್ಲಿನ ನಂದಿ ಗಿರಿಧಾಮ ಠಾಣೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಕಾರು, ಲಾರಿಯನ್ನು ಓವರ್ ಟೇಕ್ ಮಾಡುವ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಳಿಕ ಡಿವೈಡರ್ ಮತ್ತು ಎದುರಿಗೆ ಬರುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು, ಮುಗುಚಿ ಬಿದ್ದಿದೆ ಎನ್ನಲಾಗಿದೆ.ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.